ನವದೆಹಲಿ : ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿರುವ ಹಿನ್ನೆಲೆ ಈ ಸಿವಿಲ್ ಮೊಕದ್ದಮೆಯನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ವಿಚಾರಣೆ ನಡೆಸಿದರೆ ಉತ್ತಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಕರಣವನ್ನು ವಿಚಾರಣಾ ನ್ಯಾಯಾಲಯದಿಂದ ಹೈಕೋರ್ಟ್ಗೆ ವರ್ಗಾಯಿಸಲು ಹಿಂದೂ ಪಕ್ಷಗಳು ಮಾಡಿದ ಮನವಿಯನ್ನು ಅನುಮತಿಸಿದ ಅಲಹಾಬಾದ್ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ವಿವಾದಿತ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ಗಳು ಉತ್ತಮ ಸ್ಥಾನ ಮತ್ತು ಸೂಕ್ತವಾಗಿವೆ ಎಂದು ಹೇಳಿತು.