ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ : ಮೋದಿ

ಗುರುವಾರ, 22 ಜೂನ್ 2023 (13:46 IST)
ನ್ಯೂಯಾರ್ಕ್ : ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
 
ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುತ್ತದೆ. ಯೋಗ ದಿನಾಚರಣೆಗೆ ಭಾರತ ಕರೆ ನೀಡಿತ್ತು. ಭಾರತ ಕರೆ ನೀಡಿದಂತೆ ವಿಶ್ವದ ಹಲವು ದೇಶಗಳಲ್ಲಿ ಯೋಗ ಮಾಡಲಾಗುತ್ತಿದೆ ಎಂದು ಹೇಳಿದರು. 

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನಾಚರಣೆಯ ಪ್ರಸ್ತಾಪ ಬಂದಾಗ ಅದಕ್ಕೆ ದಾಖಲೆ ಸಂಖ್ಯೆಯ ದೇಶಗಳು ಬೆಂಬಲ ನೀಡಿದ್ದವು ಎಂದರು.

ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಆಹ್ವಾನ ಮೇರೆಗೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವ ಮೋದಿ ಅವರಿಗೆ ರಾಜತಾಂತ್ರಿಕ ಅಧಿಕಾರಿಗಳಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ