ಬಾಂಬ್ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ : ನಿರ್ಮಲಾ ಸೀತಾರಾಮನ್

ಸೋಮವಾರ, 26 ಜೂನ್ 2023 (11:01 IST)
ನವದೆಹಲಿ : 6 ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನು ಕೇಳಬೇಕಿತ್ತು ಎಂಬ ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಒಬಾಮ ಅವರು ಅಧಿಕಾರದಲ್ಲಿದ್ದಾಗಲೇ 6 ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆದಿತ್ತು. ಆದ್ರೆ ನಮ್ಮ ಸರ್ಕಾರ ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಯುಎಸ್ನಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ನಾವು ಯುಎಸ್ನೊಂದಿಗೆ ಸ್ನೇಹ ಬಯಸುತ್ತೇವೆ. ಆದ್ರೆ ಅಲ್ಲಿಯೂ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಟೀಕೆಗಳು ಕೇಳಿಬಂದಿವೆ. ಅಮೆರಿಕದ ಮಾಜಿ ಅಧ್ಯಕ್ಷರ ಅವಧಿಯಲ್ಲೇ 6 ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ 26,000ಕ್ಕೂ ಹೆಚ್ಚು ಬಾಂಬ್ ದಾಳಿ ನಡೆದಿತ್ತು. ಅಂಥವರು ಮೋದಿ ಬಗ್ಗೆ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡಿದರೆ ಯಾರು ನಂಬುತ್ತಾರೆ? ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ 13 ಗೌರವ ಪ್ರಶಸ್ತಿಗಳಲ್ಲಿ 6 ಪ್ರಶಸ್ತಿಗಳು ಮುಸ್ಲಿಂ ಬಹುಸಂಖ್ಯಾತ ದೇಶಗಳಿಂದ ನೀಡದವುಗಳೇ ಆಗಿವೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ