ದೌಲತ್ ಪುರ : ಪತ್ನಿಯ ಮೇಲೆ ಪತಿ ಆ್ಯಸಿಡ್ ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕ್ ನಗರ ಪೊಲೀಸ್ ಠಾಣೆಯ ದೌಲತ್ ಪುರದಲ್ಲಿ ನಡೆದಿದೆ.
ಮಹಿಳೆಗೆ 1 ವರ್ಷಗಳ ಹಿಂದೆ ವಿವಾಹವಾಗಿದ್ದು, ಆದರೆ ಪತಿಯ ಮನೆಯವರು ಮಹಿಳೆಗೆ ತುಂಬಾ ಹಿಂಸೆ ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಹಿಳೆ ತನ್ನ ತವರು ಮನೆಯಲ್ಲಿ ವಾಸವಾಗಿದ್ದಳು. ಆದರೆ ಆಕೆ ಕೆಲಸಕ್ಕೆ ಹೋಗುವ ವೇಳೆ ಪತಿ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದರಿಂದ ಆಕೆಗೆ ಸುಟ್ಟ ಗಾಯಗಳಾಗಿದ್ದು, ಅವಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.