ಲಾಲೂ ಪ್ರಸಾದ್ ಯಾದವ್ ಗೆ ಐಟಿ ಶಾಕ್

ಮಂಗಳವಾರ, 16 ಮೇ 2017 (10:55 IST)
ನವದೆಹಲಿ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ತೆರಿಗೆ ಇಲಾಖೆ ಶಾಕ್ ನೀಡಿದೆ. ಲಾಲೂಗೆ ಸೇರಿದ ಸುಮಾರು 22 ಸ್ಥಳಗಳ ಮೇಲೆ ಐಟಿ ದಾಳಿ ನಡೆಸಿದೆ.

 
1000 ಕೋಟಿ ರೂ. ಅಕ್ರಮ ಆಸ್ಥಿ ಸಂಪಾದನೆ ಪ್ರಕರಣದಲ್ಲಿ ದೆಹಲಿ ಮತ್ತು ಗುರಗಾಂವ್ ನ 22 ಪ್ರದೇಶಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲಾಲೂ ಮತ್ತು ಮಕ್ಕಳ ಅಕ್ರಮ ಆಸ್ತಿ ತನಿಖೆ ನಡೆಸುವುದಾಗಿ ಬಿಜೆಪಿ ಘೋಷಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಲಾಲೂ ಪುತ್ರಿ ಹಾಗೂ ಸಂಸದೆ ಮಿಶಾ ಭಾರ್ತಿ ಚುನಾವಣಾ ಆಯೋಗಕ್ಕೆ ತಪ್ಪು ಆಸ್ತಿ ಲೆಕ್ಕ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಕರಣದ ಬಗ್ಗೆ ತನಿಖೆ ನಡೆಸುವುದು ರಾಜ್ಯ ಸರ್ಕಾರದ ಪರಿಧಿಯಲ್ಲಿ ಬರುವುದಿಲ್ಲ. ಬಿಜೆಪಿ ಬಳಿ ದಾಖಲೆಯಿದ್ದರೆ ನ್ಯಾಯಾಲಯದ ಎದುರು ಹಾಜರುಪಡಿಸಲಿ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ