ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

Sampriya

ಭಾನುವಾರ, 22 ಜೂನ್ 2025 (17:21 IST)
Photo Credit X
ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರು ಬೃಹತ್ ರ‍್ಯಾಲಿ ನಡೆಸುವ ವೇಳೆ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜಗನ್ ಸಾಗುತ್ತಿದ್ದ ಕಾರಿನಡಿ ಸಿಲುಕಿ 55 ವರ್ಷದ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾರೆ.

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಿಂಗಯ್ಯ ಮೃತ ವ್ಯಕ್ತಿ. ಸಿಂಗಯ್ಯ ಅವರು ಜಗನ್ ಮೋಹನ್ ರೆಡ್ಡಿಯ ದೊಡ್ಡ ಅಭಿಮಾನಿಯಾಗಿದ್ದರು. ಜೂನ್ 18ರಂದು ಗುಂಟೂರಿನಲ್ಲಿ ಜಗನ್ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಜಗನ್ ನೋಡಲು ಬಂದ ವೇಳೆ ನೂಕು ನುಗ್ಗಲು ತಳ್ಳಾಟವಾಗಿ ಸಿಂಗಯ್ಯ ಕೆಳಗೆ ಬಿದ್ದಿದ್ದಾರೆ.  

ಜಗನ್‌ ಪಲ್ನಾಡು ಜಿಲ್ಲೆಗೆ ಭೇಟಿ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದೆ.

ಈ ವೇಳೆ ಕಾರು ಚಾಲಕನಿಗೆ ಕಾಣದೇ ಸಿಂಗಯ್ಯ ಮೇಲೆ ಕಾರು ಹರಿಸಿದ್ದಾನೆ. ಕೂಡಲೇ ಕಾರು ನಿಲ್ಲಿಸಿದರೂ ತಲೆಗೆ ಗಂಭೀರ ಗಾಯವಾಗಿದ್ದರಿಂದ ಇಂದು ಸಿಂಗಯ್ಯ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. 

ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆಕ್ರೋಶಗಳು ವ್ಯಕ್ತವಾಗುತ್ತಿವೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ