ಜೈರಾಮ್ ಠಾಕೂರ್‌ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ

ಭಾನುವಾರ, 24 ಡಿಸೆಂಬರ್ 2017 (20:43 IST)
ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ  ಐದು ಬಾರಿ ಶಾಸಕರಾಗಿರುವ ಜೈರಾಮ್‌ ಠಾಕೂರ್‌ ಅವರನ್ನು ಅವಿರೋಧವಾಗಿ ಬಿಜೆಪಿ ಆಯ್ಕೆ ಮಾಡಿದೆ. 
 
52 ರ ಹರೆಯದ ಜೈರಾಮ್ ಠಾಕೂರ್‌ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದು, ಯಾವುದೇ ವಿವಾದಕ್ಕೆ ಗುರಿಯಾಗದ ರಾಜಕಾರಣಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
 
ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಪ್ರೇಮ್‌ ಕುಮಾರ್‌ ಧುಮಾಲ್‌ ಅವರು ಸೋಲು ಅನುಭವಿಸಿದ್ದ ಹಿನ್ನಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಜೈರಾಮ್ ಠಾಕೂರ್ ಅವರನ್ನು ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡಲಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ