ಜಮ್ಮು ಕಾಶ್ಮೀರ : ಕಾಲಮಿತಿ ತಿಳಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ಮಂಗಳವಾರ, 29 ಆಗಸ್ಟ್ 2023 (15:09 IST)
ನವದೆಹಲಿ: ಪ್ರಸ್ತುತ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಕಾಲಮಿತಿಯನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
 
ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠದಲ್ಲಿ ನಡೆಯುತ್ತಿದೆ.

ವಿಚಾರಣೆಯ ಸಂದರ್ಭದಲ್ಲಿ ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ತಾತ್ಕಾಲಿಕವಾಗಿದ್ದು, ಭವಿಷ್ಯದಲ್ಲಿ ರಾಜ್ಯವಾಗಿ ಮರುಕಳಿಸಲಿದೆ ಎಂದು ತಿಳಿಸಿದ್ದರು.

ಮೆಹ್ತಾ ಅವರ ವಾದವನ್ನು ಆಲಿಸಿದ ಪೀಠ, ಇದು ಎಷ್ಟು ತಾತ್ಕಾಲಿಕ? ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಯಾವಾಗ ನಡೆಯಲಿದೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಮೆಹ್ತಾ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗಳು ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ