ಜಯಯಲಿತಾ ಅಂತ್ಯಕ್ರಿಯೆ ಸಂಜೆ 4.30 ಕ್ಕೆ

ಮಂಗಳವಾರ, 6 ಡಿಸೆಂಬರ್ 2016 (07:46 IST)
ಚೆನ್ನೈ: ನಿನ್ನೆ ರಾತ್ರಿ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಕ್ರಿಯೆ ಇಂದು ಸಂಜೆ 4.30 ರ ನಂತರ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಎಂಜಿಆರ್ ಸಮಾಧಿ ಬಳಿಯೇ ನಡೆಯಲಿದೆ.

ಅಂತ್ಯಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಮಧ್ಯಾಹ್ನದ ನಂತರ ಚೆನ್ನೈಗೆ ತೆರಳುವ ಸಂಭವವಿದೆ.

ಅಮ್ಮನ ನಿಧನದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ತಮಿಳಿನಾಡಿನಾದ್ಯಂತ ಶೋಕಾಚರಣೆ ನಡೆಯುತ್ತಿದ್ದು, ಅಮ್ಮನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ