ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಎಲಂಗೋವನ್ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

ಶುಕ್ರವಾರ, 20 ಮೇ 2016 (12:24 IST)
ಖಾಸಗಿ ಟೆಲಿವಿಜನ್ ಕಾರ್ಯಕ್ರಮದಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಜೆ.ಜಯಲಲಿತಾ ತಮಿಳುನಾಡು ಕಾಂಗ್ರೆಸ್ ಘಟಕದ ಅಧ್ಯಕ್ಷ ಇ.ವಿ.ಕೆ.ಎಸ್.ಎಲಂಗೋವನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
 
ಮುಖ್ಯಮಂತ್ರಿ ಜಯಲಲಿತಾ ಪರವಾಗಿ ಅವರ ವಕೀಲರಾದ ಎಂ.ಎಲ್.ಜಗನ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
 
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕಾತಿ ಮಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಜಯಲಲಿತಾ ಮತ್ತು ರಾಜ್ಯಪಾಲರು ಅವ್ಯವಹಾರವೆಸಗಿದ್ದಾರೆ ಎಂದು ಎಲಂಗೋವನ್ ಏಪ್ರಿಲ್‌ 30 ರಂದು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು.
 
ಕಳೆದ ವಾರ ರಾಜ್ಯಪಾಲ ಕೆ,.ರೋಸಯ್ಯಾ ಎಲಂಗೋವನ್ ವಿರುದ್ಧ ಮಾನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
 
ಮುಖ್ಯಮಂತ್ರಿ ಜಯಲಲಿತಾ ಅವರ ಘನತೆ ಗೌರವಕ್ಕೆ ಧಕ್ಕೆ ತರುವುದಾಗಿದೆ ಎಂದು ಜಯಾ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ