ಜೆಎನ್‌ಯು ಘರ್ಷಣೆ: ದೆಹಲಿ ಪೊಲೀಸರ ವಿರುದ್ಧ ನೂರಾರು ವಕೀಲರ ಪ್ರತಿಭಟನೆ

ಶುಕ್ರವಾರ, 19 ಫೆಬ್ರವರಿ 2016 (16:09 IST)
ಪಟಿಯಾಲಾ ಕೋರ್ಟ್ ಆವರಣದಲ್ಲಿ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ವಕೀಲರು ಇಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 
ದೆಹಲಿ ಪೊಲೀಸರು ವಕೀಲರಿಗೆ ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಕೀಲರು ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 
ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದ ಸಂದರ್ಭದಲ್ಲಿ ಬಿಜೆಪಿ ಶಾಸಕ ಓ.ಪಿ.ಶರ್ಮಾ ಕೆಲ ವಕೀಲರು ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರು.
 
ಪ್ರತಿಭಟನೆಯಲ್ಲಿ ಪಾಲ್ಗೊಂಡ ವಕೀಲರು ದೆಹಲಿ ಪೊಲೀಸರ ವಿರುದ್ದ ಘೋಷಣೆಗಳನ್ನು ಕೂಗಿದರು. ಪತ್ರಕರ್ತರು ಕೂಡಾ ತಮ್ಮ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
 
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಹಿರಿಯ ವಕೀಲ ಕಪಿಲ್ ಸಿಬಲ್ ನೇತೃತ್ವದಲ್ಲಿ ಸಮಿತಿ ರಚಿಸಿ ಘಟನೆಯ ಬಗ್ಗೆ ವರದಿ ನೀಡುವಂತೆ ಆದೇಶ ನೀಡಿದ್ದರು.

ವೆಬ್ದುನಿಯಾವನ್ನು ಓದಿ