ರಾಜ್ಯಕ್ಕೆ ಮತ್ತೆ ಜೆ.ಪಿ ನಡ್ಡಾ ಎಂಟ್ರಿ
ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜ.21 ಶನಿವಾರ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ಕೊಡಲಿದ್ದಾರೆ. ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ಬೂತ್ಗಳ ಮಟ್ಟದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನತೆ ಮುಂದಿಡಲಾಗುತ್ತದೆ.