ವಿದ್ಯುತ್ ಕಳ್ಳತನ ಪ್ರಕರಣ ಮುಚ್ಚಿಹಾಕಲು ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದ ಅಧಿಕಾರಿ

ಮಂಗಳವಾರ, 31 ಮೇ 2022 (09:40 IST)
ಲಕ್ನೋ: ವಿದ್ಯುತ್ ಕಳ್ಳತನ ಪ್ರಕರಣ ಮುಚ್ಚಿಹಾಕಲು ಜ್ಯೂ.ಇಂಜಿನಿಯರ್ ಒಬ್ಬರು ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇದೀಗ ತಪ್ಪಿತಸ್ಥ ಅಧಿಕಾರಿ ವಿರುದ್ಧ ಹಿರಿಯ ಅಧಿಕಾರಿಗಳು ತನಿಖೆಗೆ ಸೂಚಿಸಿದ್ದಾರೆ. 10 ಸಾವಿರ ರೂ. ಲಂಚ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಮುಖ್ಯ ಇಂಜಿನಿಯರ್ ಆರೋಪಿ ಅಧಿಕಾರಿಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ. ಒಂದು ವೇಳೆ ತನಿಖೆಯಲ್ಲಿ ತಪ್ಪು ಸಾಬೀತಾದರೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ