ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಭೋಜನ ಕೂಟಕ್ಕೆ ಆಹ್ವಾನಿಸಿದ ನಜೀಬ್ ಜಂಗ್

ಗುರುವಾರ, 2 ಜುಲೈ 2015 (16:03 IST)
ಭ್ರಷ್ಟಾಚಾರ ನಿಗ್ರಹ ದಳ ಮುಖ್ಯಸ್ಥರ ನೇಮಕ ಸೇರಿದಂತೆ ಹಲವಾರು ವಿಷಯಗಳಲ್ಲಿ ಭಿನ್ನಮತ ಜೀವಂತವಿರುವಂತೆಯೇ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾಗೆ ಲಂಚ್‌ಗೆ ಆಹ್ವಾನ ನೀಡಿದ್ದಾರೆ.   
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭೋಜನಕೂಟಕ್ಕೆ ಆಹ್ವಾನ ನೀಡುವ ಮೂಲಕ ನವದೆಹಲಿಯಲ್ಲಿ ಅಡಳಿತಾತ್ಮಕ ನಿಯಂತ್ರಣ ಹೊಂದಲು ಆಪ್ ಸರಕಾರ ಮತ್ತು ಲೆಫ್ಟಿನೆಂಟ್ ಗೌವರ್ನರ್ ನಡುವೆ ನಡೆಯುತ್ತಿರುವ ಬಿಕ್ಕಟ್ಟಿಗೆ ಅಂತ್ಯ ಹಾಡಲು ಬಯಸಿದಂತಾಗಿದೆ.  
 
ಮೂಲಗಳ ಪ್ರಕಾರ ,ಇದೊಂದು ವಾರದ ಪರಿಷ್ಕರಣಾ ಸಭೆಯಾಗಿದ್ದರಿಂದ ಸಹಜವಾಗಿಯೇ ಲೆಫ್ಟಿನೆಂಟ್ ಗವರ್ನರ್ ಮತ್ತು ಕೇಜ್ರಿವಾಲ್ ಭಾಗವಹಿಸಲಿದ್ದಾರೆ. ಅವರ ಜೊತೆಗೆ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಕೂಡಾ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.   
 
ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರ ನೇಮಕ ಕುರಿತಂತೆ ಉದ್ಭವಿಸಿದ ಭಿನ್ನಾಭಿಪ್ರಾಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ನಜೀಬ್ ಜಂಗ್ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.   
 
ಲೆಫ್ಟಿನೆಂಟ್ ಗವರ್ನರ್ ನಜೀಬ್  ಜಂಗ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಧ್ಯದ ಸಭೆ ಯಶಸ್ವಿಯಾಗುವ ಸಾಧ್ಯತೆಗಳಿವೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ.  
 

ವೆಬ್ದುನಿಯಾವನ್ನು ಓದಿ