ನ್ಯಾ. ಮಾಹೇಶ್ವರಿ ಸುಪ್ರೀಂಕೋರ್ಟ್ ಜಡ್ಜ್ ಆಗಿ ಪದೋನ್ನತಿ; ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

ಶನಿವಾರ, 12 ಜನವರಿ 2019 (09:52 IST)
ನವದೆಹಲಿ : ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಆಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಮಾಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ಜಡ್ಜ್ ಆಗಿ ಪದೋನ್ನತಿಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಸಿಜೆಐ ರಂಜನ್ ಗೋಗೊಯ್ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

 

ಕೊಲಿಜಿಯಂ ನಿಯಮದಂತೆ ತನ್ನ ತೀರ್ಮಾನವನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಕಳುಹಿಸಿಕೊಡಲಿದೆ. ಅದು ರಾಷ್ಟ್ರಪತಿ ಅವರಿಗೆ ಕಳುಹಿಸಲಿದೆ. ಮುಂದಿನ ಒಂದು ವಾರದಲ್ಲಿ ರಾಷ್ಟ್ರಪತಿ ಅವರಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ