ನಿರ್ದೇಶಕ ಕೆ.ಬಾಲಚಂದರ್ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬುಧವಾರ, 17 ಡಿಸೆಂಬರ್ 2014 (12:18 IST)
ಕಾಲಿವುಡ್‌ನ ಖ್ಯಾತ ನಿರ್ದೇಶಕರೋರ್ವರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಖ್ಯಾತ ನಿರ್ದೇಶಕ ಕೆ.ಬಾಲಚಂದರ್, ಕಳೆದ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಪ್ರಸ್ತುತ ಆರೋಗ್ಯ ಸ್ಥಿತಿ ಗಂಭೀರವಾದ  ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 
 
ಇನ್ನು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆಯೇ ಕಾಲಿವುಡ್ ಚಿತ್ರರಂಗದ ನಟ ವಿಜಯ್ ಕುಮಾರ್, ನಟಿ ಖುಶ್ಬೂ ಹಾಗೂ ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ. ಇನ್ನು ಖ್ಯಾತ ನಟ ಕಮಲ್ ಹಾಸನ್ ನಟನೆಯಲ್ಲಿ ಬ್ಯುಸಿಯಾಗಿರುವುದರಿಂದ ದೂರವಾಣಿ ಕರೆ ಮಾಡಿ ಆರೋಗ್ಯ ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ