ಎರಡು ದಿನದಲ್ಲಿ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ ಕಮಲ್ ಹಾಸನ್

Krishnaveni K

ಸೋಮವಾರ, 19 ಫೆಬ್ರವರಿ 2024 (16:19 IST)
Photo Courtesy: Twitter
ಚೆನ್ನೈ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೇ ಎಲ್ಲಾ ಸಣ್ಣ ಪುಟ್ಟ ರಾಜಕೀಯ ಪಕ್ಷಗಳು ಪ್ರಮುಖ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುತ್ತಿವೆ. ಈ ಪೈಕಿ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮಯಮ್ ಪಕ್ಷವೂ ಒಂದು.

ಕಮಲ್ ಪಕ್ಷ ಸ್ಥಾಪನೆಯಾಗಿ ಎರಡು ವರ್ಷವೇ ಕಳೆದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಮಲ್ ಪಕ್ಷಕ್ಕೆ ಯಶಸ್ಸು ಸಿಕ್ಕಿಲ್ಲ. ಇದೀಗ ಲೋಕಸಭೆ ಚುನಾವಣೆಗೆ ಕಮಲ್ ಹಾಸನ್ ರಾಷ್ಟ್ರೀಯ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದ್ದಾರೆ.

ಈ ಮೊದಲು ಕಮಲ್ ಹಾಸನ್ ಆಮ್ ಆದ್ಮಿ, ಕಾಂಗ್ರೆಸ್ ಜೊತೆ ಮೈತ್ರಿ ಹೊಂದಿದ್ದರು. ಇದೀಗ ಲೋಕಸಭೆ ಚುನಾವಣೆಗೆ ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ವಿಚಾರವನ್ನು ಎರಡೇ ದಿನದಲ್ಲಿ ಬಹಿರಂಗಪಡಿಸುವುದಾಗಿ ಕಮಲ್ ಹೇಳಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಎರಡು ದಿನದಲ್ಲಿ ಸಿಹಿ ಸುದ್ದಿ ನೀಡುತ್ತೇನೆ. ಈಗಾಗಲೇ ಮಾತುಕತೆ ನಡೆಸುತ್ತಿದ್ದು, ಒಳ್ಳೆಯ ಸುದ್ದಿಹೊರಬೀಳಲಿದೆ ಎಂಬ ನಿರೀಕ್ಷೆಯಲ್ಲಿರುವುದಾಗಿ ಕಮಲ್ ಹೇಳಿಕೊಂಡಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಮಲ್ ಪಕ್ಷ ಹೀನಾಯ ಸೋಲು ಕಂಡಿತ್ತು. ಈ ಬಾರಿ ಡಿಎಂಕೆ ಜೊತೆ ಕಮಲ್ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಸ್ಪಷ್ಟ ಮಾಹಿತಿ ನೀಡುವುದಾಗಿ ಕಮಲ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ