ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಇನ್ನಿಲ್ಲ!

ಬುಧವಾರ, 28 ಫೆಬ್ರವರಿ 2018 (09:51 IST)
ಚೆನ್ನೈ: ಕಂಚಿ ಕಾಮಕೋಟಿ ಪೀಠಾಧಿಪತಿ ಜಯೇಂದ್ರ ಸರಸ್ವತಿ ಶ್ರೀಗಳು ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
 

ಸ್ವಾಮೀಜಿಗಳಿಗೆ 82 ವರ್ಷ ವಯಸ್ಸಾಗಿತ್ತು. ಜಯೇಂದ್ರ ಸರಸ್ವತಿ ಶ್ರೀಗಳಿಗೆ ಉಸಿರಾಟದ ಸಮಸ್ಯೆಯಿತ್ತು. ಈ ಹಿನ್ನಲೆಯಲ್ಲಿ ಅವರು ಚೆನ್ನೈನ ಶಂಕರ ಆಸ್ಪತ್ರೆಗೆ ದಾಖಲಾಗಿದ್ದರು.

1954 ರಿಂದ ಜಯೇಂದ್ರ ಸರಸ್ವತಿ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿಯಾಗಿದ್ದರು.  ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ