ಕಣ್ಣೂರು ಎಡಿಎಂ ಆತ್ಮಹತ್ಯೆ ಪ್ರಕರಣ: ಸಿಪಿಎಂ ನಾಯಕಿ ದಿವ್ಯಾ ಬಂಧನ

Sampriya

ಮಂಗಳವಾರ, 29 ಅಕ್ಟೋಬರ್ 2024 (17:57 IST)
Photo Courtesy X
ಕಣ್ಣೂರು:  ಮಾಜಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ.  

ಸಿಪಿಐ(ಎಂ) ನಾಯಕಿ ಪಿಪಿ ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಲಶ್ಶೇರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಮಂಗಳವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಟಿ.ನಿಸ್ಸಾರ್ ಅಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ನ್ಯಾಯಾಲಯ, ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಬಂಧನಕ್ಕೆ ದಾರಿ ಮಾಡಿಕೊಟ್ಟಿದೆ.

 ಅಕ್ಟೋಬರ್ 14ರಂದು ಸಿಪಿಎಂ ನಾಯಕಿ ದಿವ್ಯಾ ಅವರು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ನವೀನ್ ಬಾಬು ಅವರು ಆತ್ಮಹತ್ಯೆಗೆ ಶರಣಾಗಿದ್ದರು.  ಇವರ ಆತ್ಮಹತ್ಯೆಗೆ ಸಿಪಿಎಂ ನಾಯಕಿ ಪಿಪಿ ದಿವ್ಯಾ ಅವರು ಕಾರ್ಯಕ್ರಮವೊಂದರಲ್ಲಿ ಬಾಬು ವಿರುದ್ಧ ಭಷ್ಟ ಎಂದು ಹೇಳಿಕೆ ನೀಡಿದ್ದು ಎನ್ನಲಾಗಿದೆ.

ಬಾಬು ಸಾವಿನ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು  ದಿವ್ಯಾ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ