ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ಬಿಜೆಪಿ ಕಾರ್ಯಕರ್ತನ ಸಾವು

ಭಾನುವಾರ, 21 ಆಗಸ್ಟ್ 2016 (12:03 IST)
ಜಿಲ್ಲೆಯ ಕೊಧುಪರಮಾ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತ ದೀಕ್ಷಿತ್, ತನ್ನ ಮನೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
 
23 ವರ್ಷ ವಯಸ್ಸಿನ ದೀಕ್ಷಿತ್ ಬಿಜೆಪಿ ಕಾರ್ಯಕರ್ತ ಮನೆಯಲ್ಲಿ ಬಾಂಬ್ ಸಿದ್ದಪಡಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ಸ್ಫೋಟಗೊಂಡ ಪರಿಣಾಮವಾಗಿ ಸಾವನ್ನಪ್ಪಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪೊಲೀಸ್ ಮೂಲಗಳ ಪ್ರಕಾರ, ಬಿಜೆಪಿ ಕಾರ್ಯಕರ್ತ ದೀಕ್ಷಿತ್, ನಿನ್ನೆ ಸಂಜೆ 7 ಗಂಟೆಗೆ ಬಾಂಬ್ ತಯಾರಿಸುತ್ತಿರುವ ಸಂದರ್ಭದಲ್ಲಿ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ. ಇತರರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದ್ದು ಅವರ ವಿವರಗಳು ತಿಳಿದು ಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ