ಸುಪ್ರೀಂ ಮೇಲೆ ನನಗೆ ಭರವಸೆ ಇಲ್ಲ ಎಂದ ಕಪಿಲ್ ಸಿಬಲ್
ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಇಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ.
ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಕಾರ್ಯನಿರ್ವಹಿಸಿ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಬಂದರೂ, ಅದು ನೆಲದ ವಾಸ್ತವತೆಯನ್ನು ಎಂದಿಗೂ ಬದಲಾಯಿಸುವುದಿಲ್ಲ ಎಂದ ಅವರು, ಈ ವರ್ಷ ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸುತ್ತೇನೆ. 50 ವರ್ಷಗಳ ನಂತರ ನನಗೆ ಸುಪ್ರೀಂ ಕೋರ್ಟ್ ಮೇಲೆ ಯಾವುದೇ ಭರವಸೆ ಇಲ್ಲ.