ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?
ಮಂಗಳವಾರ, 7 ಏಪ್ರಿಲ್ 2020 (10:14 IST)
ಬೆಂಗಳೂರು: ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ದೇಶದಲ್ಲಿ ಹೆಚ್ಚುತ್ತಲೇ ಇದೆ. ಮೊದಲ ಬಲಿ ಪಡೆದಿದ್ದ ಕರ್ನಾಟಕ ಈಗ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?
ಆರಂಭದಲ್ಲಿ 3 ನೇ ಸ್ಥಾನದಲ್ಲಿದ್ದ ಕರ್ನಾಟಕದ ಸ್ಥಿತಿ ಗಂಭೀರವಾಗಬಹುದು ಎಂದೇ ಲೆಕ್ಕಾಚಾರವಾಗಿತ್ತು. ಆದರೆ ಸೂಕ್ತ ಸಮಯದಲ್ಲಿ ನಿಯಂತ್ರಣ ಹೇರಿದ ಕಾರಣ ಈಗ ಹತ್ತನೇ ಸ್ಥಾನದಲ್ಲಿದೆ.
ಕರ್ನಾಟಕದಲ್ಲಿ ಇದುವರೆಗೆ 144 ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ 4 ಮಂದಿ ಸಾವನ್ನಪ್ಪಿದ್ದು ಹಲವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಇನ್ನು, 503 ಸೋಂಕಿತರನ್ನು ಹೊಂದಿರುವ ದೆಹಲಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, 490 ಸೋಂಕಿತರೊಂದಿಗೆ ದ್ವಿತೀಯ, 485 ಸೋಂಕಿತರನ್ನು ಹೊಂದಿರುವ ತಮಿಳುನಾಡು ಮೂರನೇ ಸ್ಥಾನದಲ್ಲಿದೆ. ದ್ವಿತೀಯ ಸ್ಥಾನದಲ್ಲಿದ್ದ ಕೇರಳದಲ್ಲಿ ಈಗ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, 306 ಸೋಂಕಿತರನ್ನು ಹೊಂದಿದ್ದು ನಾಲ್ನೇ ಸ್ಥಾನದಲ್ಲಿದೆ.