ದೇಶದ ರಪ್ತು ರಾಜ್ಯಗಳಲ್ಲಿ ಕರ್ನಾಟಕ ನಂಬರ್.1
ದೇಶದಲ್ಲಿ ರಫ್ತು ಮಾಡುವ ರಾಜ್ಯಗಳ ಪೈಕಿ ಕರ್ನಾಟಕ ಪ್ರಸ್ತುತ ನಾಲ್ಕನೇ ಸ್ಥಾನದಲ್ಲಿದ್ದು, ನೂತನ ಉದ್ಯಮ ನೀತಿಯು ರಾಜ್ಯವನ್ನು ಮೊದಲನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ವಾಣಿಜ್ಯ, ಕೈಗಾರಿಕೆ ಉತ್ತೇಜನ ಮತ್ತು ಆಂತರಿಕ ವ್ಯವಹಾರಗಳ ಇಲಾಖೆ ಆಯೋಜಿಸಿದ್ದ ಪ್ರಧಾನಮಂತ್ರಿಗಳ ಗತಿಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗತಿಶಕ್ತಿ-ಇದೊಂದು ವಿದ್ಯುನ್ಮಾನ ವೇದಿಕೆಯಾಗಿದ್ದು, ರೈಲ್ವೆ ಮತ್ತು ರಸ್ತೆ ಸಾರಿಗೆ ಸೇರಿದಂತೆ 16 ಮಂತ್ರಾ ಲಯಗಳನ್ನು ಒಗ್ಗೂಡಿಸಿ, ರಾಷ್ಟ್ರದಲ್ಲಿ ಮೂಲಸೌಕರ್ಯ ಸಂಪರ್ಕ ಯೋಜನೆಗಳ ಸಮಗ್ರ ಯೋಜನೆಯನ್ನು ಸಿದ್ಧಪಡಿಸುತ್ತದೆ ಮತ್ತು ಅವುಗಳ ಸಹಭಾಗಿತ್ವದಲ್ಲಿ ಅನುಷ್ಠಾನವನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ ಎಂದರು.