ಜಾರಿ ನಿರ್ದೇಶನಾಲಯದಿಂದ ಕಾರ್ತಿ ಚಿದಂಬರಂ ಅಕೌಂಟ್ಸ್,ಆಸ್ತಿ ಜಪ್ತಿ

ಸೋಮವಾರ, 25 ಸೆಪ್ಟಂಬರ್ 2017 (13:50 IST)
ಆಸ್ತಿ ಮಾರಾಟಕ್ಕೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಬ್ಯಾಂಕ್‌ ಖಾತೆ, ಆಸ್ತಿಯನ್ನು ಜಾರಿ ನಿರ್ದೇಶನಲಾಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಏರ್‌ಸೆಲ್-ಮ್ಯಾಕ್ಸಿಸ್ ಅವ್ಯವಹಾರ ಕೇಸ್ ಸಂಬಂಧ ಕಾರ್ತಿ ಚಿದಂಬರಂ ಅವರ ಬ್ಯಾಂಕ್ ಖಾತೆ ಮತ್ತು ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಕಾರ್ತಿ ಚಿದಂಬರಂ ವಿದೇಶಗಳಲ್ಲಿರುವ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸುತ್ತಿರುವುದಲ್ಲದೇ ಆಸ್ತಿಯನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕಠಿಣ ಕ್ರಮ ಜಾರಿಗೊಳಿಸಿದೆ.
 
ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕೂಡಾ ವಿಚಾರಣೆ ನಡೆಸುತ್ತಿದ್ಗು, ಇದೀಗ ಇಡಿ ಇಲಾಖೆ ಕೂಡಾ ದಾಳಿಯನ್ನು ನಡೆಸಿ ಅವ್ಯವಹಾರವನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ