ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿಯವರನ್ನು ಅನಾರೋಗ್ಯ ನಿಮಿತ್ತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
93 ವರ್ಷದ ಕರುಣಾನಿಧಿ ಕಳೆದ ಕೆಲವು ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹೆಚ್ಚಿನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರುಣಾನಿಧಿ ಆರೋಗ್ಯ ಸ್ಥಿರವಾಗಿದ್ದು, ಸಂಜೆ ವೇಳೆಗೆ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯಕ್ಕೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಕರುಣಾನಿಧಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.