ವರದಿಗಳ ಪ್ರಕಾರ, ಇಬ್ಬರು ಉಗ್ರರು ವಸತಿ ಪ್ರದೇಶದಲ್ಲಿ ಅಡಗಿದ್ದಾರೆ ಎನ್ನುವ ಮಾಹಿತಿ ಪಡೆದ ಸೇನಾಪಡೆಗಳು, ಸ್ಥಳವನ್ನು ಸುತ್ತುವರಿದು ಗುಂಡಿನ ದಾಳಿ ನಡೆಸಿದಾಗ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರಿಂದ ಎರಡು ಎಕೆ-47 ರೈಫಲ್‌ಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾಮೂಲಗಳು ತಿಳಿಸಿವೆ.