ಉಗ್ರ ಹತ್ಯೆ: ಹೊತ್ತಿ ಉರಿಯುತ್ತಿದೆ ಕಾಶ್ಮೀರ, 16 ಸಾವು, ಗೃಹ ಸಚಿವ ರಾಜನಾಥ್ ಸಭೆ

ಭಾನುವಾರ, 10 ಜುಲೈ 2016 (12:25 IST)
ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆ ಕಮಾ೦ಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ವಿರೋಧಿಸಿ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಯಲ್ಲಿ 16 ಜನರು ಬಲಿಯಾಗಿದ್ದಾರೆ. 

ಭದ್ರತಾ ಸಿಬ್ಬಂದಿ ಮತ್ತು  ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ನಿನ್ನೆ 11 ಮಂದಿ ಸಾವನ್ನಪ್ಪಿದ್ದರು. ಇಂದು ಆ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.  ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕಾಶ್ಮೀರ ಕಣಿವೆಯಲ್ಲಿ ಕರ್ಫ್ಯೂವನ್ನು ಹೇರಲಾಗಿದೆ. 
 
ಹಿಂಸಾಚಾರ ತೀವ್ರಗೊಳ್ಳುತ್ತಿದ್ದಂತೆ ಕಾಶ್ಮೀರದಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಧಗಿತಗೊಳಿಸಲಾಗಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು  ಸೇನೆಯನ್ನು ನಿಯೋಜಿಸಲಾಗಿದೆ. ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
 
ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 200ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 
 
ಘಟನೆಯ ತೀವ್ರತೆಯನ್ನು ಗಮನಿಸಿ  ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ್ದಾರೆ. ಗೃಹ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ (ಕಾಶ್ಮೀರ ವಿಭಾಗ) ಮಾಹಿತಿ ಮತ್ತು ಪ್ರಸಾರ ಮುಖ್ಯಸ್ಥರು ಹಾಗೂ ಗೃಹ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ