ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವುದೇ ಮೋದಿ ಕಾಯಕ: ರಾಹುಲ್ ಗಾಂಧಿ

ಶುಕ್ರವಾರ, 16 ಸೆಪ್ಟಂಬರ್ 2016 (13:17 IST)
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಕಾಶ್ಮಿರ ಶಾಂತಿಯುತವಾಗಿತ್ತು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವುದು ಹೇಗೆ ಎನ್ನುವುದು ಚೆನ್ನಾಗಿ ಗೊತ್ತಿರುವುದರಿಂದ ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಇಂತಹ ರಾಜಕೀಯದಿಂದಲೇ ಕಾಶ್ಮಿರ ಹೊತ್ತಿ ಉರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
 
ಪ್ರಧಾನಿ ಮೋದಿ ಕಾಶ್ಮಿರದಲ್ಲೂ ಇಂತಹ ನೀತಿ ಅನುಸರಿಸುತ್ತಿದ್ದಾರೆ. ಶಾಂತಿಯುತವಾಗಿದ್ದ ಕಾಶ್ಮಿರ ಎರಡು ತಿಂಗಳ ನಂತರವೂ ಶಾಂತಗೊಳ್ಳುವ ಸೂಚನೆ ಕಂಡುಬರುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
 
ಹರಿಯಾಣಾದಲ್ಲಿ ಜಾಟ್ ಸಮುದಾಯದ ವಿರುದ್ಧ ಜಾಟ್‌ರಹಿತ ಸಮುದಾಯದವರನ್ನು ಎತ್ತಿಕಟ್ಟಿದ್ದಾರೆ. ಉತ್ತರಪ್ರದೇಶ ಮತ್ತು ಆಸ್ಸಾಂ ರಾಜ್ಯಗಳಲ್ಲೂ ಇಂತಹ ಕೃತ್ಯವನ್ನೇ ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಶಾಂತಿಯ ತಾಣಗಳಾಗಿದ್ದ ರಾಜ್ಯಗಳು ಪ್ರಧಾನಿ ಮೋದಿ ಸರಕಾರದ ಅವಧಿಯಲ್ಲಿ ಇಂದು ಗಲಭೆಗಳಿಗೆ ಹೆಸರುವಾಸಿಯಾಗಿವೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ