ರಾಷ್ಟ್ರವಿರೋಧಿ ಘೋಷಣೆ ಕೂಗಿದವರನ್ನು ಯಾಕೆ ಬಂಧಿಸಿಲ್ಲ: ಬಿಜೆಪಿಗೆ ಕೇಜ್ರಿವಾಲ್ ಪ್ರಶ್ನೆ

ಸೋಮವಾರ, 29 ಫೆಬ್ರವರಿ 2016 (13:16 IST)
ಜವಾಹರಲಾಲ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದವರನ್ನು ಇನ್ನುವರೆಗೆ ಬಂಧಿಸಲಾಗಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಸರ್ಕಾರವನ್ನು ರಚಿಸುವ ಬಿಜೆಪಿಯ ಮಹಾಭಿಲಾಷೆಯೇ ಇದಕ್ಕೆ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೂರಿದ್ದಾರೆ. 
 
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕೇಜ್ರಿವಾಲ್, ಜೆಎನ್‌ಯುನಲ್ಲಿ ನಡೆದ ದೇಶದ್ರೋಹಿ ಕೃತ್ಯದ ಆರೋಪಿಗಳನ್ನು ಬಂಧಿಸಲು ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ. ಆರೋಪಿಗಳು ಬಂಧಿಸಲ್ಪಟ್ಟರೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅಸಮಾಧಾನಗೊಳ್ಳಬಹುದು ಎಂಬ ಆತಂಕ ಅವರದು ಎಂದು ಅವರು ಆರೋಪಿಸಿದ್ದಾರೆ. 
 
ಈ ರೀತಿಯ ರಾಜಕಾರಣವನ್ನು ಮಾಡುತ್ತಿದ್ದರೆ, ನಿಜವಾಗಿಯೂ ಇದೇ ಕಾರಣಕ್ಕೆ ಅವರು ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದರೆ ಅದು ದೊಡ್ಡ ತಪ್ಪು ಎಂದು ಕೇಜ್ರಿವಾಲ್ ಹೇಳಿದ್ದಾರೆ. 
 
ಮಾಧ್ಯಮಗಳ ವರದಿಗಳ ಪ್ರಕಾರ ಫೆಬ್ರವರಿ 9 ರಂದು ಜೆಎನ್‌ಯುನಲ್ಲಿ ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದವರು ಕಾಶ್ಮೀರಿಗಳಾಗಿದ್ದಾರೆ. 

ವೆಬ್ದುನಿಯಾವನ್ನು ಓದಿ