ಪಂಜಾಬ್ ರೈತರನ್ನು ಭೇಟಿಯಾಗಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಬುಧವಾರ, 10 ಫೆಬ್ರವರಿ 2016 (19:35 IST)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 20 ರಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಲಿದ್ದು ಐದು ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸಾಲದ ಭಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
 
ಕೇಜ್ರಿವಾಲ್ ಐದು ದಿನಗಳ ಕಾಲ ಪಂಜಾಬ್ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಆಪ್ ನಾಯಕ ದುರ್ಗೇಶ್ ಪಾಠಕ್ ತಿಳಿಸಿದ್ದಾರೆ.
 
ರಾಜ್ಯದ ಹಲವಾರು ಗ್ರಾಮಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಲಿರುವ ಕೇಜ್ರಿವಾಲ್, ಡ್ರಗ್ಸ್ ವ್ಯಸನಿಗಳ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಪಂಜಾಬ್ ಉಸ್ತುವಾರಿ ಹೊತ್ತಿರುವ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. 
 
ಮುಂಬರುವ ಒಂದೆರಡು ದಿನಗಳಲ್ಲಿ ಕೇಜ್ರಿವಾಲ್ ಪ್ರವಾಸ ಕಾರ್ಯಕ್ರಮವನ್ನು ಅಂತಿಮಗೊಳಿಸಲಾಗುವುದು ಎಂದು ಆಪ್ ಮೂಲಗಳು ತಿಳಿಸಿವೆ.
 
ಕಳೆದ ಜನೆವರಿ 14 ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಕೇಜ್ರಿವಾಲ್, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯವನ್ನು ಮುಕ್ತಸರ್ ನಗರದಲ್ಲಿ ಭಾರಿ ಸಾರ್ವಜನಿಕ ಸಭೆ ನಡೆಸುವ ಮೂಲಕ ಚಾಲನೆ ನೀಡಿದ್ದರು.

ವೆಬ್ದುನಿಯಾವನ್ನು ಓದಿ