ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಸೆಪ್ಟೆಂಬರ್ 15ರಿಂದ ಕೇರಳದಲ್ಲಿ ಲಾಕ್ ಡೌನ್?
ಕಳೆದ ಒಂದು ವಾರದಿಂದ ಸುಮಾರು 30 ಸಾವಿರ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಸೆಪ್ಟೆಂಬರ್ 15ರೊಳಗೆ ನಿಯಂತ್ರಣಕ್ಕೆ ಬಾರದಿದ್ದರೆ ಕೇರಳದಲ್ಲಿ ಲಾಕ್ ಡೌನ್
ವಿಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಭಾನುವಾರ ಕೇರಳದಲ್ಲಿ 29,836 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 75 ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಒಟ್ಟಾರೆ ಸೋಂಕಿತರ ಸಂಖ್ಯೆ 40,07,408ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 20,541ಕ್ಕೆ ಜಿಗಿತ ಕಂಡಿದೆ.
ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಕೊರೊನಾ ಚೈನ್ ಲಿಂಕ್ ಕಡಿತಗೊಳಿಸಲು ಸಂಪೂರ್ಣ ಲಾಕ್ ಡೌನ್ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಸೆಪ್ಟೆಂಬರ್ 15ರವರೆಗೆ ಕಾದು ನೋಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.