ತಿರುವನಂತಪುರಂ : ಶಬರಿಮಲೆ ಅಯ್ಯಪ ದೇಗುಲ ತೆರೆಯುತ್ತಿದ್ದಂತೆಯೇ ಪೊಲೀಸರ ಕೈಪಿಡಿಯೊಂದು ವಿವಾದ ಸೃಷ್ಟಿಸಿದೆ.
ಹೌದು, ಶಬರಿಮಲೆ ದೇವಾಲಯದ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಕೈಪಿಡಿಯನ್ನು ಹಿಂದಕ್ಕೆ ಪಡೆದು ಪರಿಷ್ಕೃತ ಕೈಪಿಡಿಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.
ಈಗ ಹಿಂತೆಗೆದುಕೊಂಡಿರುವ ಕೈಪಿಡಿಯಲ್ಲಿ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಪ್ರಕಾರ ಶಬರಿಮಲೆಗೆ ಎಲ್ಲಾ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಬರೆಯಲಾಗಿದೆ.
2018ರಲ್ಲಿ ಸರ್ವೋಚ್ಚ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿತ್ತು.
ಋತುಮತಿ ಆಗುವ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ಹೇಳಿತ್ತು. ಈಗ ಕೂಡ ಇದೇ ಆದೇಶವನ್ನು ಪರೋಕ್ಷವಾಗಿ ಕೈಪಿಡಿಯಲ್ಲಿ ಉಲ್ಲೇಖಿಸಿ, ಎಲ್ಲ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿಸಲಾಗಿದೆ ಎಂದು ಬರೆಯಲಾಗಿದೆ.