ಕರ್ನಾಟಕದ ನಂದಿನಿ ಹಾಲು ಮಾರಾಟಕ್ಕೆ ಕೇರಳ ಹಾಲು ಒಕ್ಕೂಟ ವಿರೋಧ

ಸೋಮವಾರ, 19 ಜೂನ್ 2023 (12:29 IST)
ತಿರುವನಂತಪುರಂ : ಕೇರಳದಲ್ಲಿ ಕರ್ನಾಟಕದ ನಂದಿನಿ ಹಾಲು ಉತ್ಪನ್ನಗಳ ಮಾರಾಟಕ್ಕೆ ಮಿಲ್ಮ ಎಂದೇ ಹೆಸರಾಗಿರುವ ಕೇರಳ ಹಾಲು ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.
 
ಮಿಲ್ಮಾ ಮಲಬಾರ್ ವಲಯ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಮಾತನಾಡಿ, ಭಾರತೀಯ ರಾಷ್ಟ್ರೀಯ ಸಹಕಾರಿ ಡೈರಿ ಫೆಡರೇಶನ್ನ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದ್ದಾರೆ. 

ದೇಶದಲ್ಲಿರುವ ಹಾಲು ಒಕ್ಕೂಟಗಳು ಇಷ್ಟು ದಿನ ಅನುಸರಿಸಿಕೊಂಡು ಬಂದಿರುವ ಕೆಲವು ನಿಯಮಗಳನ್ನು ಮುರಿಯುವುದು ನೈತಿಕವಾಗಿ ಸರಿಯಲ್ಲ. ಕರ್ನಾಟಕ ಕಾರ್ಪೊರೇಟ್ ಹಾಲು ಉತ್ಪಾದಕರು ಕೇರಳದಲ್ಲಿ ತನ್ನ ಮಳಿಗೆಗಳನ್ನು ತೆರೆಯುವ ನಿರ್ಧಾರದ ವಿರುದ್ಧ ಪತ್ರವನ್ನು ನೀಡಿದ್ದರೂ, ಅವರು ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ