ನಿರಾಶ್ರಿತರ ಕೇಂದ್ರಕ್ಕೆ ಪರಿಹಾರ ಸಾಮಗ್ರಿಗಳನ್ನು ಹೆಗಲ ಮೇಲೆ ಹೊತ್ತು ತಂದ ಕೇರಳ ಸಚಿವರು ಯಾರು ಗೊತ್ತಾ?

ಬುಧವಾರ, 29 ಆಗಸ್ಟ್ 2018 (12:01 IST)
ತಿರುವನಂತಪುರಂ : ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ನಲುಗಿ ಹೋದ ಕೇರಳದ ತ್ರಿಶೂರ್ ಜಿಲ್ಲೆಯ ನಿರಾಶ್ರಿತರ ಕೇಂದ್ರಕ್ಕೆ ಸಚಿವರೊಬ್ಬರು ಪರಿಹಾರ ಸಾಮಗ್ರಿಗಳನ್ನು ಸ್ವತಃ ತಾವೇ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ನೀಡಿದ್ದಾರೆ.


ಕೇರಳದ ಮಹಾಮಳೆಗೆ ಪ್ರವಾಹ ಉಂಟಾಗಿದ್ದು, ಇದರಿಂದ  ಜನರು ರಕ್ಷಣೆ ಪಡೆಯಲು ನಿರಾಶ್ರಿತರ ಕೇಂದ್ರಗಳಲ್ಲಿ ನೆಲೆಸಿದ್ದಾರೆ. ಈ ವೇಳೆ ತ್ರಿಶೂರ್ ಜಿಲ್ಲೆಯ ನಿರಾಶ್ರಿತ ಕೇಂದ್ರದಲ್ಲಿ ನೆಲೆಸಿದ್ದ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿಗಳು ಸಿಗದೇ ಜನ ಒದ್ದಾಡುತ್ತಿದ್ದರು.


ಈ ವಿಚಾರ ತಿಳಿದ ಶಿಕ್ಷಣ ಸಚಿವ ರವೀಂದ್ರನಾಥ್ ಅವರು ತಕ್ಷಣ ಪರಿಹಾರ ಸಾಮಗ್ರಿಗಳನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತರ ಕೇಂದ್ರಕ್ಕೆ ಬಂದು ನೀಡಿದ್ದಾರೆ. ಜನರ ಕಷ್ಟಕ್ಕೆ ಸ್ಪಂದಿಸಿದ ಸಚಿವರ ಮಾನವೀಯ ಗುಣಗಳನ್ನು ಕಂಡು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ