ಕೇರಳ ವಿಧಾನಸಭೆ ಚುನಾವಣೆ: ಮಾಜಿ ಕ್ರಿಕೆಟಿಗ ಶ್ರೀಶಾಂತ್‌ಗೆ ಸೋಲು
ಗುರುವಾರ, 19 ಮೇ 2016 (13:24 IST)
ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಖ್ಯಾತ ಕ್ರಿಕೆಟಿಗ ಎಸ್.ಶ್ರೀಶಾಂತ್, ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.
33 ವರ್ಷ ವಯಸ್ಸಿನ ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿ ನಂತರ ನ್ಯಾಯಾಲಯದಿಂದ ದೋಷಮುಕ್ತರಾಗಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು. ಆದರೆ, ಆರಂಭದಲ್ಲಿಯೇ ಸೋಲನುಭವಿಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯಲ್ಲಿ 140 ವಿಧಾನಸಭೆ ಕ್ಷೇತ್ರಗಳಲ್ಲಿ ಎಲ್‌ಡಿಎಫ್ ಪಕ್ಷ 87 ಕ್ಷೇತ್ರಗಳಲ್ಲಿ ಜಯಗಳಿಸಿ ಸರಕಾರ ರಚಿಸುವ ನಿಟ್ಟಿನಲ್ಲಿ ಸಾಗಿದೆ.
ಅಧಿಕಾರರೂಡ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ ಕೇವಲ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಹಿನ್ನೆಡೆ ಅನುಭವಿಸಿದೆ.
ಪಲಕ್ಕಾಡ್‌ನಲ್ಲಿ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ ಮಾತನಾಡಿ, ರಾಜ್ಯದಲ್ಲಿ ಎಡಪಕ್ಷಗಳ ಅಲೆಯಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.