ನವದೆಹಲಿ : ಸಾಮಾಜಿಕ ಜಾಲತಾಣಗಳಾದ ಪೇಸ್ಬುಕ್, ಟ್ವಿಟ್ಟರ್, ಗೂಗಲ್ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕೆಂದು ಕೇಂದ್ರ ಕಂಪನಿಗಳೊಂದಿಗೆ ಸಭೆ ನಡೆಸಿ ವಾರ್ನಿಂಗ್ ನೀಡಿದೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ಫೇಸ್ಬುಕ್, ಟ್ವಿಟ್ಟರ್, ಗೂಗಲ್ ಸೇರಿ ಹಲವು ಸಾಮಾಜಿಕ ಜಾಲತಾಣಗಳೊಂದಿಗೆ ಕೇಂದ್ರ ಚರ್ಚಿಸಿದ್ದು, ಪ್ರಮುಖವಾಗಿ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಯಂತ್ರಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಡಕ್ ವಾರ್ನಿಂಗ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಸಾಮಾಜಿಕ ಜಾಲತಾಣ ಕಂಪನಿಗಳ ಜೊತೆ ಚರ್ಚಿಸಿದ ಕೇಂದ್ರ, ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಹಿಡಿಯಬೇಕು. ಈ ಬಗ್ಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುತ್ತದೆ. ಈಗಾಗಲೇ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಈ ನಿಯಮಗಳನ್ನು ಪಾಲಿಸದೆ ಇದ್ದರೆ, ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದು ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ ಎಂದು ವರದಿಯಾಗಿದೆ.