ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಸೋಮವಾರ, 1 ಜನವರಿ 2024 (20:20 IST)
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ.. ಪಾಟ್ನಾದ ನಡುರಸ್ತೆಯಲ್ಲಿ ಪೊಲೀಸರು ಮಹಿಳೆ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.

ಪೊಲೀಸ್​​ ಇನ್ಸ್​​ಪೆಕ್ಟರ್ ರಾಜ್‌ಕಿಶೋರ್‌ ಸಿಂಗ್‌​​​​​​​ ಮಹಿಳೆಗೆ ಲಾಠಿಯಿಂದ ಹಲ್ಲೆ ಮಾಡಿದ್ದಾರೆ.. ಕಿಡ್ನ್ಯಾಪ್ ಪ್ರಕರಣ ಸಂಬಂಧ 2 ಕುಟುಂಬಗಳ ನಡುವೆ ಗಲಾಟೆಯಾಗಿದೆ.. ಇಬ್ಬರು ಮಹಿಳೆಯರು ನಡುರಸ್ತೆಯಲ್ಲಿ ಕಿತ್ತಾಡಿಕೊಂಡಿದ್ದಾರೆ.. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.. ಇನ್ನು ಪೊಲೀಸರ ಮೇಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ