ಅರುಣಾಚಲ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಪೇಮಾ ಖಾಂಡೂ ಆಯ್ಕೆ

ಶನಿವಾರ, 16 ಜುಲೈ 2016 (13:52 IST)
ವಿಧಾನಸಭೆಯಲ್ಲಿ ಇಂದು ಬಹುಮಾತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಬಂಡಾಯ ಶಾಸಕರ ಮನಗೆಲ್ಲಲು ಮುಖ್ಯಮಂತ್ರಿ ನಬಾಮ್ ಟುಕಿಯ ಬದಲಿಗೆ ಪೇಮಾ ಖಾಂಡೂ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಿದೆ.
 
ಮುಖ್ಯಮಂತಿ ನಬಾಮ್ ಟುಕಿಯವರನ್ನು ಬೆಂಬಲಿಸುವುದಿಲ್ಲ. ಬದಲಿಗೆ ಖಾಂಡೂ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದಲ್ಲಿ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದರಿಂದ ನಾಯಕತ್ವದಲ್ಲಿ ಬದಲಾವಣೆ ಮಾಡಲಾಗಿದೆ. 
 
ಏತನ್ಮಧ್ಯೆ, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿಎಂ ಟುಕಿ ರಾಜೀನಾಮೆ ನೀಡಿದ್ದು, ಒಂದು ವೇಳೆ ಕಾಂಗ್ರೆಸ್ ಪಕ್ಷ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದಲ್ಲಿ ಖಾಂಡೂ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
 
ಕೇಂದ್ರ ಸರಕಾರ ಅರುಣಾಚಲ ಪ್ರದೇಶದಲ್ಲಿ ರಾಜ್ಯ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿರುವ ಕ್ರಮ ಕಾನೂನುಬಾಹಿರ ಎಂದು ತೀರ್ಪು ನೀಡಿ, ಕಾಂಗ್ರೆಸ್ ಪಕ್ಷದ ಸರಕಾರ ಮುಂದುವರಿಯುವಂತೆ ಆದೇಶ ನೀಡಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ