ಆಸ್ಪತ್ರೆಯಿಂದ ಶಿಶುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬುಧವಾರ, 24 ಫೆಬ್ರವರಿ 2021 (07:30 IST)
ಇಂದೋರ್ : ಆಸ್ಪತ್ರೆಯಿಂದ ಶಿಶುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಇಂದೋರ್ ನ ವಿಶೇಷ ಕಾರ್ಯಪಡೆ ಏಳು ಜನರನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

ಈ ಕೃತ್ಯದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದ ಆರೋಪಿ ಮಹಿಳೆ ಮಗುವನ್ನು ಕದ್ದು ಮತ್ತಿಬ್ಬರ ಸಹಾಯದಿಂದ ಮಕ್ಕಳಿಲ್ಲದ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾದಿಯನ್ನು ಸೇರಿಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ