ಬಾಲಕಿಯನ್ನು ಅಪಹರಿಸಿ, ಒಂದೂವರೆ ತಿಂಗಳಿನಿಂದ ನಿರಂತರವಾಗಿ ಮಾಡಿದ್ದಾದ್ರು ಏನು?

ಮಂಗಳವಾರ, 29 ಆಗಸ್ಟ್ 2023 (08:39 IST)
ಲಕ್ನೋ : 15 ವರ್ಷದ ಬಾಲಕಿಯನ್ನು ಅಪಹರಿಸಿದ್ದಲ್ಲದೇ ಒಂದೂವರೆ ತಿಂಗಳ ಕಾಲ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶದ ಬಲ್ಲಿಯಾ ಪೊಲೀಸರ ಪ್ರಕಾರ, ಜುಲೈ 9 ರಿಂದ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಮನೆಯಿಂದ ಬಾಲಕಿ ಕಾಣೆಯಾಗಿದ್ದಳು. ಬಾಲಕಿ ಕಾಣೆಯಾದ ಮರುದಿನ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ಅಂತೆಯೇ ಬಾಲಕಿಯ ಹುಡುಕಾಟದಲ್ಲಿದ್ದ ಪೊಲೀಸರು ಆಗಸ್ಟ್ 26ರಂದು ದಿಯೋರಿಯಾ ಎಂಬ ಪ್ರದೇಶದಿಂದ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆ ದಾಖಲಿಸಿದ್ದಾರೆ. 

ಬಿಹಾರದ ಸಿವಾನ್ ಜಿಲ್ಲೆಯ ನಿವಾಸಿ ರಾಹುಲ್ ಕುಮಾರ್ ಸಿಂಗ್ (19) ತನ್ನನ್ನು ಅಪಹರಿಸಿದ ನಂತರ ಡಿಯೋರಿಯಾಕ್ಕೆ ಕರೆದೊಯ್ದಿದ್ದಾನೆ. ನಂತರ ಅಲ್ಲಿ ಸೆರೆಯಾಗಿರಿಸಿಕೊಂಡು ಸುಮಾರು ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿರುವುದಾಗಿ ಎಸ್ಎಚ್ಒ ರಾಜೀವ್ ಸಿಂಗ್ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ