ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಕಿರಣ್ ಬೇಡಿ

ಮಂಗಳವಾರ, 3 ಏಪ್ರಿಲ್ 2018 (08:00 IST)
ಚೆನ್ನೈ : ಈಗಾಗಲೇ ಕಾವೇರಿ ನಿರ್ವಹಣಾ ಮಂಡಳಿಯ ರಚನೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಇದೀಗ ಪಾಂಡಿಚೇರಿ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಬೇಗನೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ.


ಪಾಂಡಿಚೇರಿಯ ಕಾರೈಕಲ ಪ್ರದೇಶದ ಜನರು ಸಂಪೂರ್ಣವಾಗಿ ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಸರಿಯಾದ ಸಮಯಕ್ಕೆ ನೀರು ಬಿಡದಿದ್ದರೆ ಇಲ್ಲಿನ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಪಾಂಡಿಚೇರಿಗೆ 7 ಟಿಎಂಸಿ ನೀರು ಬಿಡುಗಡೆಗೆ ಸೂಚಿಸಿದ್ದು, ಹೀಗಾಗಿ ತಾವು ಸಂಬಂಧಪಟ್ಟ ಸಚಿವರಿಗೆ ಶೀಘ್ರವೇ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ರಚಿಸಲು ಸೂಚಿಸಿ ಎಂದು ಕಿರಣ್ ಬೇಡಿ ಅವರು ಪ್ರಧಾನಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ