ಈ ಹಿಂದೆ ಅಟಾರ್ನಿ ಜನರಲ್ ಆಗಿದ್ದ ಮುಕುಲ್ ರೋಹ್ಟಗಿ ಅವರು ವೇಣುಗೋಪಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸದ್ಯ ಸೇವೆ ಸಲ್ಲಿಸುತ್ತಿದ್ದ ಮುಕುಲ್ ರೋಹ್ಟಗಿ ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ, ರೋಹ್ಟಗಿ ಅವರು ತಮ್ಮನ್ನು ಮರು ನೇಮಕಕ್ಕೆ ಪರಿಗಣಿಸದಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ವೇಣುಗೋಪಾಲ್ ಅವರನ್ನು ಆಯ್ಕೆ ಮಾಡಲಾಗಿತ್ತು.
ಸುಮಾರು 50 ವರ್ಷಗಳ ಅನುಭವ ಹೊಂದಿರುವ ಕೆ ಕೆ ವೇಣುಗೋಪಾಲ್, ಬೆಳಗಾವಿಯ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ.1979ರಲ್ಲಿ ಮೊರಾರ್ಜಿ ದೇಸಾಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಸಾಯಿ ಅವರ ಆಹ್ವಾನದ ಮೇರೆಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.