ನೂತನ ವಿದೇಶಾಂಗ ಸಚಿವ ಜೈಶಂಕರ್ ಬಗ್ಗೆ ನಿಮಗೆ ಗೊತ್ತಾ?
ದೆಹಲಿ ಮೂಲದ ಜೈಶಂಕರ್ ಮೂಲತಃ ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯಾಗಿ, ವಿದೇಶಾಂಗ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವಿ. ಭಾರತ ಮತ್ತು ಅಮೆರಿಕಾ ನಡುವಿನ ಪರಮಾಣು ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದವರು ಇದೇ ಜೈಶಂಕರ್.
ಇವರ ಸೇವೆ ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯೂ ಇವರಿಗೆ ಒಲಿದು ಬಂದಿದೆ. ವಿದೇಶಾಂಗ ವಿಚಾರಗಳಲ್ಲಿ ಅಪಾರ ಅನುಭವ ಹೊಂದಿರುವ ಜೈಶಂಕರ್ ಇದೇ ಮೊದಲ ಬಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.