ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾನಿಲಯದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಯೊಂದಿಗೆ ಹಿರಿಯ ಮಹಿಳಾ ಪ್ರಾಧ್ಯಾಪಕಿಯೊಬ್ಬರು "ಮದುವೆಯಾದ" ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂಬಂಧ ಬುಧವಾರ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಪ್ರೊಫೆಸರ್ ಇದು ತನ್ನ ತರಗತಿಯ ಭಾಗವಾಗಿದ್ದ ನಾಟಕ ಎಂದು ಹೇಳಿಕೊಂಡರು. ನಾಡಿಯಾ ಜಿಲ್ಲೆಯ ಹರಿಂಗಟದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ಮನೋವಿಜ್ಞಾನ ವಿಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೋದಲ್ಲಿ ಪ್ರೊಫೆಸರ್ ವಧುವಿನಂತೆ ಕಂಗೊಳಿಸುತ್ತಿದ್ದು, ವಿದ್ಯಾರ್ಥಿ 'ಸಿಂಧೂರ್ ದಾನ' ಮತ್ತು 'ಮಾಲಾ ಬೋಡೋಲ್' ಸೇರಿದಂತೆ ಹಿಂದೂ ಬಂಗಾಳಿ ವಿವಾಹದಂತೆ ವಿಧಾನ ಮಾಡುತ್ತಿರುವುದು ಕಂಡುಬಂದಿದೆ.
ವೀಡಿಯೋಗಳು ವೈರಲ್ ಆಗುತ್ತಿದ್ದಂತೆ, ಟೀಕೆ ಮತ್ತು ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ, ವಿಶ್ವವಿದ್ಯಾನಿಲಯವು ಮೂರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಿತು ಮತ್ತು ಪ್ರಾಧ್ಯಾಪಕರಿಂದ ಸ್ಪಷ್ಟೀಕರಣವನ್ನು ಕೇಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.