ಚೆನ್ನೈ 12 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಶುಕ್ರವಾರ, 22 ಏಪ್ರಿಲ್ 2022 (08:08 IST)
ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯ ಹಾದಿಯಲ್ಲಿದ್ದು, ಚೆನ್ನೈ ಐಐಟಿಯಲ್ಲಿ 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
 
ಪರೀಕ್ಷೆಗೆ ಕಳುಹಿಸಲಾಗಿದ್ದ 18 ಮಾದರಿಗಳಲ್ಲಿ 12 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

3 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಒಟ್ಟು 18 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ 12 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಸೋಂಕು 18ಕ್ಕಿಂತ ಕಡಿಮೆಯಾಗಿತ್ತು. ಪ್ರಸ್ತುತ ಸೋಂಕಿನ ಪ್ರಮಾಣ 33ಕ್ಕೆ ಏರಿಕೆಯಾಗಿದೆ. ಹಾಗಾಗಿ ಎಚ್ಚರಿಕೆಯಿಂದ ಇರುವಂತ ರಾಜ್ಯ ಆರೋಗ್ಯ ಸಚಿವಾಲಯ ಹೇಳಿದೆ.

ಜಿನೋಮ್ ಸೀಕ್ವೊನ್ಸಿಂಗ್ನ ಪ್ರಕಾರ ಶೇ.90ರಷ್ಟುಪ್ರಕರಣಗಳು ಒಮಿಕ್ರೋನ್ ಬಿ.ಎ.2 ರೂಪಾಂತರಿಗಳಾಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ