ರಾಷ್ಟ್ರಪತಿಯಾಗಿ 100 ದಿನಗಳನ್ನು ಪೂರೈಸಿದ ರಾಮನಾಥ್ ಕೋವಿಂದ್

ಬುಧವಾರ, 1 ನವೆಂಬರ್ 2017 (12:57 IST)
ಸಮಯ ಅಮೂಲ್ಯವೆಂದು ಪರಿಗಣಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, ತಮ್ಮ ಅಧಿಕಾರವಧಿಯ 100 ದಿನಗಳನ್ನು ಪೂರೈಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ಹೇಳಿದ್ದಾರೆ.  
ಕಳೆದ ಜುಲೈ 25 ರಂದು ದೇಶದ 14ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಕೋವಿಂದ್, ಈಗಾಗಲೇ ಹಲವು ರಾಜ್ಯಗಳಿಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸೌಹಾರ್ದತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಪ್ರಸಕ್ತ ವರ್ಷಾಂತ್ಯಕ್ಕೆ ದೇಶದ ಎಲ್ಲಾ ರಾಜ್ಯಗಳನ್ನು ಭೇಟಿ ಮಾಡುವ ಗುರಿಯನ್ನು ರಾಷ್ಟ್ರಪತಿಗಳು ಹೊಂದಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ತಿಳಿಸಿದ್ದಾರೆ.
 
ಎನ್‌ಡಿಎ ಮೈತ್ರಿಕೂಟದ ಸರಕಾರವಿರುವ ರಾಜ್ಯಗಳಿಗೆ ಭೇಟಿ ನೀಡಿದ್ದಲ್ಲದೇ ಎನ್‌ಡಿಎಯೇತರ ಸರಕಾರಗಳಿರುವ ಕರ್ನಾಟಕ, ಕೇರಳ ರಾಜ್ಯಗಳಿಗೆ ಭೇಟಿ ನೀಡಿ ಯಾವುದೇ ಸರಕಾರಗಳ ಬಗ್ಗೆ ಪಕ್ಷಪಾತ ಧೋರಣೆ ತೋರುವುದಿಲ್ಲ ಎನ್ನುವ ಸಂದೇಶ ಸಾರಿದ್ದಾರೆ.
 
ರಾಷ್ಟ್ರಪತಿ ಭವನವನ್ನು ಸಾಮಾನ್ಯ ಜನತೆಗೆ ಲಭ್ಯವಾಗುವ ದಿಕ್ಕಿನಲ್ಲಿ ರಾಷ್ಟ್ರಪತಿ ಕೋವಿಂದ್ ತೆಗೆದುಕೊಂಡ ಕ್ರಮಗಳು ಶ್ಲಾಘನೀಯವಾಗಿವೆ ಎಂದು ರಾಷ್ಟ್ರಪತಿ ಭನದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ