ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬ ಹಿನ್ನಲೆ; ಸೋನಿಯಾ ಗಾಂಧಿ ಭೇಟಿಗೆ ಹೊರಟ ದಿನೇಶ್ ಗುಂಡೂರಾವ್

ಗುರುವಾರ, 20 ಫೆಬ್ರವರಿ 2020 (10:18 IST)
ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬ ಹಿನ್ನಲೆ ಇಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಅಧ್ಯಕ್ಷ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.


ಈಗಾಗಲೇ ದಿನೇಶ್ ಗುಂಡುರಾವ್  ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮೂರು ತಿಂಗಳು ಕಳೆದಿದೆ. ಆದರೂ ಇನ್ನೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಆಗಿಲ್ಲ.


ಈ ಹಿನ್ನಲೆಯಲ್ಲಿ ಇಂದು ದಿನೇಶ್ ಗುಂಡೂರಾವ್ ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು  ಭೇಟಿಯಾಗಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಸೋನಿಯಾ ಭೇಟಿಗೆ ಸಮಯ ನಿಗದಿಯಾಗಿದ್ದು, ರಾಜ್ಯ ರಾಜಕಾರಣದ ಬೆಳವಣೆಗೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ