ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್

ಶುಕ್ರವಾರ, 25 ಆಗಸ್ಟ್ 2023 (09:18 IST)
ನವದೆಹಲಿ : ಕಾವೇರಿ ನದಿ ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನ್ಯಾ. ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ. ಕರ್ನಾಟಕ, ಸುಪ್ರೀಂ ಕೋರ್ಟ್ ಆದೇಶದನ್ವಯ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಜೂನ್, ಜುಲೈ ತಿಂಗಳ ನೀರು ಬಾಕಿ ಉಳಿಸಿಕೊಂಡಿದ್ದು ಆಗಸ್ಟ್ ತಿಂಗಳ ನೀರು ಸೇರ್ಪಡೆಯಾಗಲಿದೆ.

ಕರ್ನಾಟಕ ಒಟ್ಟು 36.76 ಟಿಎಂಸಿ ನೀರು ಬಾಕಿ ಉಳಿಸಿಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಬಳಿಕವೂ ಸಮರ್ಪಕ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ