ಐಟಿ ಅಧಿಕಾರಿಗಳಿಂದ ಲಾಲೂ ಯಾದವ್ ಪತ್ನಿ, ಪುತ್ರನ ವಿಚಾರಣೆ

ಮಂಗಳವಾರ, 29 ಆಗಸ್ಟ್ 2017 (16:06 IST)
ಆದಾಯ ತೆರಿಗೆ ಅಧಿಕಾರಿಗಳು ಬಿಹಾರ್ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಪುತ್ರನ ವಿಚಾರಣೆ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಗ್ರಹ ಕುರಿತಂತೆ ಲಾಲು ಪತ್ನಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
 
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪಾಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್, ಮತ್ತು ಪುತ್ರಿ ಮೀಸಾ ಯಾದವ್ ನಿವಾಸಗಳ ಮೇಲೆ ದಾಳಿ ನಡೆಸಿ ಕೇಸ್ ದಾಖಲಿಸಿದ್ದಾರೆ.
 
ಆದಾಯ ತೆರಿಗೆ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರಿಗೆ ಐಟಿ ಇಲಾಖೆ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್‌ ಹಿನ್ನೆಲೆಯಲ್ಲಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ವಿಚಾರಣೆಗೆ ಹಾಜರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ