ಕೇರಳದ ವಯನಾಡಿನಲ್ಲಿ ಭೂಕುಸಿತ: 19 ಸಾವು, ಮರುಕಳಿಸಿದ ಹಳೆಯ ಘಟನೆ

Krishnaveni K

ಮಂಗಳವಾರ, 30 ಜುಲೈ 2024 (09:47 IST)
ವಯನಾಡು: ಕೇರಳದಲ್ಲಿ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗಿದ್ದು, 19 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

2018 ರಲ್ಲಿ ಇದೇ ರೀತಿ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗಿತ್ತು. ಈ ವೇಳೆ ಹಲವು ಸಾವು ನೋವು ಸಂಭವಿಸಿತ್ತು. ಇದೀಗ ಮತ್ತೆ ಅದೇ ಹಳೆಯ ಘಟನೆ ಪುನರಾವರ್ತನೆಯಾಗುವ ಭೀತಿ ಎದುರಾಗಿದೆ. ಇಂದು ಮುಂಜಾನೆ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ಗುಡ್ಡಕುಸಿತವಾಗಿದೆ.

ಇತ್ತೀಚೆಗಿನ ವರದಿ ಪ್ರಕಾರ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಆದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇಂದು ನಸುಕಿನಲ್ಲಿ 2 ಗಂಟೆಗೆ ಮತ್ತು 4.10 ಕ್ಕೆ ಎರಡನೇ ಬಾರಿ ಗುಡ್ಡ ಕುಸಿತವಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಸಾಕಷ್ಟು ಮನೆಗಳು ನೆಲಸಮವಾಗಿದೆ.

ತಕ್ಷಣವೇ ಸ್ಥಳಕ್ಕೆ ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸಿದೆ. ಇನ್ನು, ಕೇರಳ ಜಲಸ್ಪೋಟದ ಬಗ್ಗೆ ಪ್ರಧಾನಿ ಮೋದಿ ಕೂಡಾ ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತುಕತೆ ನಡೆಸಿದ್ದು, ಎಲ್ಲಾ ರೀತಿಯ ನೆರುವ ನೀಡಲು ಸಿದ್ಧರಿರುವುದಾಗಿ ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ